ಕೊತ್ತಂಬರಿ ಬೀಜ ನೀರು!ಎಷ್ಟೋ ಅನಾರೋಗ್ಯಗಳಿಗೆ ದೂರ
ಕೊತ್ತಂಬರಿ ಬೀಜವನ್ನು ಭಾರತೀಯ ಆಹಾರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಳಸಲಾಗುತ್ತದೆ. ಸಾಂಬಾರು ಪದರ್ಥಗಳಲ್ಲಿ ಕೊತ್ತಂಬರಿ ಬೀಜ ಅಥವಾ ಕೊತ್ತಂಬರಿ ಪುಡಿಯನ್ನು ಬಳಸಲಾಗುತ್ತದೆ.
ಕೊತ್ತಂಬರಿ ಬೀಜವನ್ನು ಭಾರತೀಯ ಆಹಾರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಳಸಲಾಗುತ್ತದೆ. ಸಾಂಬಾರು ಪದಾರ್ಥಗಳಲ್ಲಿ ಕೊತ್ತಂಬರಿ ಬೀಜ ಅಥವಾ ಕೊತ್ತಂಬರಿ ಪುಡಿಯನ್ನು ಬಳಸಲಾಗುತ್ತದೆ. ಅಲ್ಲದೆ, ಆಹಾರವನ್ನು ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಲಾಗುತ್ತದೆ. ಕೊತ್ತಂಬರಿ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ . ಪ್ರತಿದಿನ ಕೊತ್ತಂಬರಿ ನೀರನ್ನು ಕುಡಿಯುವುದು ಆರೋಗ್ಯಕ್ಕೆ ಸಹಕಾರಿಯಾಗಿದೆ. ಹಾಗಿದ್ದರೆ, ಕೊತ್ತಂಬರಿ ನೀರನ್ನು ಹೇಗೆ ತಯಾರಿಸುವುದು ನೋಡೋಣ.
ಕೊತ್ತಂಬರಿ ನೀರನ್ನು ಹೇಗೆ ತಯಾರಿಸುವುದು : ರಾತ್ರಿ 1 ಕಪ್ ಕುಡಿಯುವ ನೀರಿನಲ್ಲಿ 1 ಟೀಸ್ಪೂನ್ ಕೊತ್ತಂಬರಿ ಬೀಜಗಳನ್ನು ನೆನೆಸಿ. ಬೆಳಿಗ್ಗೆ ಈ ನೀರನ್ನು ಸೋಸಿಕೊಳ್ಳಿ. ಹೀಗೆ ಸೋಸಿಕೊಂಡ ನಂತರ ಆ ನೀರನ್ನು ಕುಡಿಯಬಹುದು. ನೆನೆಸಿದ ಬೀಜಗಳನ್ನು ಮತ್ತೆ ಒಣಗಿಸುವ ಮೂಲಕ ಅದನ್ನು ಮತ್ತೆ ಬಳಸಬಹುದು.
ಕೊತ್ತಂಬರಿ ನೀರನ್ನು ಕುಡಿಯುವುದರಿಂದ ಆಗುವ ಲಾಭಗಳು :
- ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಹಾಯ ಮಾಡುತ್ತದೆ. ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಗಳು ದೇಹದ ಫ್ರೀ ರಾಡಿಕಲ್ಸ್ ಗಳನ್ನೂ ಕಡಿಮೆ ಮಾಡಲು ಸಹಾಯ ಮಾಡುತ್ತದೆ.
- ಇದು ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುತ್ತದೆ. ಬೆಳಿಗ್ಗೆ ಇದನ್ನು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆಯು ಆರೋಗ್ಯಕರವಾಗಿರುತ್ತದೆ.
- ಕೊತ್ತಂಬರಿ ವಿಟಮಿನ್ ಕೆ, ಸಿ ಮತ್ತು ಎ ಯಿಂದ ಸಮೃದ್ಧವಾಗಿದೆ. ಇದು ಕೂದಲನ್ನು ಬಲಪಡಿಸಲು ಮತ್ತು ಬೆಳೆಯಲು ಸಹಾಯ ಮಾಡುತ್ತದೆ.
-ಕೊತ್ತಂಬರಿ ನೀರನ್ನು ಪ್ರತಿದಿನ ಸೇವಿಸಿದರೆ, ಅದು ಕೀಲು ನೋವನ್ನು ಕಡಿಮೆ ಮಾಡಬಹುದು.